ವಿದ್ಯಾರ್ಥಿ ಬಸ್‌ ಪಾಸ್

 

ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಈ ಕ್ರಮಗಳನ್ನು ಅನುಸರಿಸುವುದು.
 

ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೆಳಕಂಡ ಕ್ರಮಗಳನ್ನು ಅನುಸರಿಸುವುದು.

 1. ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಸೇವಾಸಿಂಧು ಪೋರ್ಟಲ್ ಐಡಿ URL-https://sevasindhuservices.karnataka.gov.in.
 2. ವಿದ್ಯಾರ್ಥಿಗಳು ದಿನಾಂಕ: 12.06.2023 ರಿಂದ ಸೇವಾಸಿಂಧು ಪೋರ್ಟಲ್‍ನಲ್ಲಿ ಬಸ್ ಪಾಸ್‍ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಯಾವುಧೇ ಶುಲ್ಕ ಇರುವುದಿಲ್ಲ.
 3. ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ.
 4. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‍ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‍ಎಂಎಸ್ ಮುಖೇನ ಕಳುಹಿಸಲಾಗುವುದು.
 5. ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‍ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ.
 6. ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯುವ ಅಗತ್ಯವಿದೆ. ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹುದಾಗಿರುತ್ತದೆ.
 7. ಕರಾರಸಾನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್‍ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‍ಸೈಟ್‍ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್ ವಿಳಾಸ: https://ksrtc.karnataka.gov.in / buspassservices
 8. ವಿದ್ಯಾರ್ಥಿ ಪಾಸಿನ ದರಗಳು:

ಕ್ರ ಸಂ

ಪಾಸಿನ ವಿಧ

ಅವಧಿ

ಪಾಸಿನ ಒಟ್ಟು ದರ (ರೂ ಗಳಲ್ಲಿ)

ಪಾಸಿನ ದರ+ಸಂಸ್ಕರಣಾ ಶುಲ್ಕ +ಅ.ಪ.ನಿ

ಸಾಮಾನ್ಯ ವಿದ್ಯಾರ್ಥಿಗಳಿಗೆ  

ಪ.ಜಾ ಹಾಗೂ ಪ.ಪಂ ವಿದ್ಯಾರ್ಥಿಗಳಿಗೆ

1

ಪ್ರಾಥಮಿಕ ಶಾಲೆ

10 ತಿಂಗಳು

100 + 50

ರೂ.150/-

100 + 50

ರೂ.150/-

2

ಪ್ರೌಢಶಾಲೆ ಬಾಲಕರು

10 ತಿಂಗಳು

600+100+50

ರೂ.750/-

100 + 50

ರೂ.150/-

3

ಪ್ರೌಢಶಾಲೆ ಬಾಲಕಿಯರು

10 ತಿಂಗಳು

400+100+50

ರೂ.550/-

100 + 50

ರೂ.150/-

4

ಕಾಲೇಜು / ಡಿಪ್ಲೊಮೋ

10 ತಿಂಗಳು

900+100+50

ರೂ.1050/-

100 + 50

ರೂ.150/-

5

ಐಟಿಐ 

10 ತಿಂಗಳು

1150+100+60

ರೂ.1310/-

100 + 60

ರೂ.160/-

6

ವೃತ್ತಿಪರ ಕೋರ್ಸುಗಳು

10 ತಿಂಗಳು

1400+100+50

ರೂ.1550/-

100 + 50

ರೂ.150/-

7

ಸಂಜೆ ಕಾಲೇಜು / ಪಿಹೆಚ್‍ಡಿ

10 ತಿಂಗಳು

1200+100+50

ರೂ.1350/-

100 + 50

ರೂ.150/-

 

 1. ವಿದ್ಯಾರ್ಥಿ ಪಾಸುಗಳಿಗೆ ಅರ್ಜಿ ಸಲ್ಲಿಕೆ/ ಪಾಸು ಮುದ್ರಣ ಸಂಬಂಧ ದೂರುಗಳಿದ್ದಲ್ಲಿ, ಈ ಕೆಳಕಂಡ ಸಹಾಯವಾಣಿಯನ್ನು ಸಂಪರ್ಕಿಸುವುದು.

ದೂರು / ಸಲಹೆಗಳಿಗೆ

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ/

ಇ-ಮೇಲ್ ವಿಳಾಸ

ಸೇವಾಸಿಂಧು ಪೋರ್ಟಲ್ ಮುಖೇನ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಸಂಬಂಧಿಸಿದ ವಿಷಯಗಳಿಗೆ

8792662814

8792662816

ಇ-ಮೇಲ್:sevasindhu@karnataka.gov.in

ಪಾಸ್ ವಿತರಣಾ ಕೇಂದ್ರಗಳಲ್ಲಿ ಪಾಸ್ ಕಾರ್ಡ್‍ನ ಮುದ್ರಣ & ವಿತರಣೆಗೆ ಸಂಬಂಧಿಸಿದ ವಿಷಯಗಳಿಗೆ

8904085030

ಇ-ಮೇಲ್:  onehelpdesk@karnataka.gov.in

ಕರಾರಸಾ ನಿಗಮದ ಕಾಲ್ ಸೆಂಟರ್

080-26252625

ಇ-ಮೇಲ್: callcentre@ksrtc.org

 

 ವಿದ್ಯಾರ್ಥಿ ಪಾಸುಗಳ ವಿತರಣೆ ಮಾಡುವ 129 ಕೌಂಟರ್‌ಗಳ ವಿಳಾಸ - ಕ.ರಾ.ರ.ಸಂ.ನಿ

 

 Image result for download icon

 

ಸೇವಾಸಿಂಧು ಪೋರ್ಟಲ್ ಲಿಂಕ್‌

 

https://sevasindhuservices.karnataka.gov.in/

 

 

 

ವಿದ್ಯಾರ್ಥಿಗಳು ಮೇಲ್ಕಂಡ ಸೌಲಭ್ಯವನ್ನು ಪಡೆದುಕೊಳ್ಳಲು ಕೋರಿದೆ.

 

 

ಇತ್ತೀಚಿನ ನವೀಕರಣ​ : 15-06-2023 03:31 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080